Language Settings
Select Website Language

ಕ್ರೀಡಾಪಟುಗಳಿಗೆ ನೇರ ನೇಮಕಾತಿಯಲ್ಲಿ ಮೀಸಲಾತಿ! (Sports Reservation)

4 months ago

ಕ್ರೀಡಾಪಟುಗಳಿಗೆ ನೇರ ನೇಮಕಾತಿಯಲ್ಲಿ ಮೀಸಲಾತಿ!

 

ಸುದ್ದಿ: ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಅರಣ್ಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಪರಿಷತ್ತಿನಲ್ಲಿ ಘೋಷಿಸಿದರು.

 

ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಅರಣ್ಯ ಇಲಾಖೆಯಲ್ಲಿ ಶೇ 3, ಪೊಲೀಸ್ ಇಲಾಖೆಯಲ್ಲಿ ಶೇ. 3 ಮತ್ತಿತರ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲು ಜಾರಿಗೊಳಿಸುವುದಾಗಿ ತಿಳಿಸಿದರು.

 

ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ 13 ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೇಮಕಾತಿ ನೀಡಿದೆ.

 

ಪೊಲೀಸ್ ಇಲಾಖೆಯಲ್ಲಿ 70 ಕಾನ್‌ಸ್ಟೆಬಲ್‌ಗಳು ಮತ್ತು 14 ಪಿಎಸ್‌ಐಗಳಿಗೆ ನೇರ ನೇಮಕಾತಿ ಮಾಡಲಾಗಿದೆ. ಜೊತೆಗೆ ಅರಣ್ಯ ಇಲಾಖೆಯಲ್ಲಿ ಶೇ.3, ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ.2ರಷ್ಟು ಮೀಸಲಾತಿ ನೀಡುವ ಮೂಲಕ ಕ್ರೀಡಾ ಪಟುಗಳಿಗೆ ಉತ್ತೇಜನ ನೀಡಲಾಗುವುದು.